ಅಕ್ರಮ ಗೋವುಗಳ ಸಾಗಾಟ:
ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸ್ ದಾಳಿ ನಡೆಸಿದ್ದಾರೆ.
ದಿನಾಂಕ 30-08-16ರಂದು ವಿರಾಜಪೇಟೆ ಗ್ರಾಮಾಂತರ ಠಾಣಾ ಪಿ.ಎಸ್.ಐ.ರವರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ಬೊಳ್ಳುಮಾಡು ಗ್ರಾಮದಲ್ಲಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಅಕ್ರಮವಾಗಿ ರಾಸುಗಳನ್ನು ಒಂದು ಒಂದು ಪಿಕ್ ಅಪ್ ಜೀಪಿನಲ್ಲಿ ತುಂಬಿಸಿಕೊಂಡು ಕಸಾಯಿ ಖಾನೆಗೆ ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ಕಡಂಗ ಅರಪಟ್ಟು ಗ್ರಾಮದ ನಿವಾಸಿ ಸಿ.ಇ. ಇರ್ಷಾದ್ ಎಂಬವರನ್ನು ಹಾಗು ರಾಸುಗಳನ್ನು ಸಾಗಾಟಕ್ಕೆ ಬಳಸಿದ ಪಿಕ್ ಅಪ್ ವಾಹನವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವ್ಯಕ್ತಿ ಸಾವು:
ಚಲಿಸುತ್ತಿದ್ದ ಬಸ್ಸಿನಿಂದ ವ್ಯಕ್ತಿಯೊಬ್ಬರು ಬಾಗಿಲಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ದಿನಾಂಕ 29-8-2016 ರಂದು ವಿರಾಜಪೇಟೆ ತಾಲೋಕು ಚೆಂಬೆಬೆಳ್ಳೂರು ಗ್ರಾಮದ ನಿವಾಸಿ ತಿಮ್ಮಯ್ಯ ಎಂಬವರು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ವಿರಾಜಪೇಟೆ ಕಡೆಯಿಂದ ಚೆಂಬೆಬೆಳ್ಳೂರು ಕಡೆಗೆ ಪ್ರಯಾಣಿಸುತ್ತಿದ್ದಾಗ ಹಿಂಬದಿ ಬಾಗಿಲಿನಿಂದ ಅಕಸ್ಮಿಕವಾಗಿ ಹೊರಗಡೆ ಬಿದ್ದು ತೀವ್ರವಾಗಿ ಗಾಯಗೊಂಡು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಸಾವನಪ್ಪಿದ್ದು, ಬಸ್ಸು ಚಾಲಕನ ವಿರುದ್ದ ಪ್ರಕರಣ ದಾಖಲಿಸಿದ ವಿರಾಜಪೇಟೆ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಕ್ರಮ ಸಾರಾಯಿ ತಯಾರಿಕೆ, ಪ್ರಕರಣ ದಾಖಲು:
ಈ ದಿನ ದಿನಾಂಕ 29.08.2016ರಂದು ಸಮಯ 11.00 ಪಿ.ಎಂಗೆ ಸೋಮವಾರಪೇಟೆ ಪೊಲೀಸ್ ವೃತ್ತ ನಿರೀಕ್ಷಕರಾದ ಎಸ್. ಪರಶಿವ ಮೂರ್ತಿಯವರು ಶನಿವಾರಸಂತೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಸ್ತು ಕರ್ತವ್ಯದಲ್ಲಿರುವಾಗ್ಗೆ ಕೊಡ್ಲಿಪೇಟೆ ದೊಡ್ಡಕೊಡ್ಲಿ ಗ್ರಾಮದ ಕಲ್ಲಾರೆಯ ರಾಜೇಗೌಡರವರ ಮಗನಾದ ಎಂ.ಆರ್ ನಾಗೇಶರವರ ಮನೆಯ ಹಿಂಭಾಗದ ವಾಸರೆಯಲ್ಲಿ ಕಳ್ಳಭಟ್ಟಿಯನ್ನು ಕಾಯಿಸುತ್ತಿರುವುದಾಗಿದೆ ಎಂದು ಮಾಹಿತಿ ಬಂದ ಮೇರೆಗೆ ಸ್ಥಳಕ್ಕೆ ದಾಳಿ ಮಾಡಿ ಕಳ್ಳಭಟ್ಟಿಯನ್ನು ತಯಾರಿಸಲು ಪುಳಗಂಜಿಯನ್ನು ಕಾಯಿಸುತ್ತಿರುವುದು ಮತ್ತು ಬಿಂದಿಗೆಯಲ್ಲಿ ಶೇಖರಿಸಿರುವುದನ್ನು ಪತ್ತೆ ಹಚ್ಚಿ ಸಾರಾಯಿ ತಯಾರಿಸಲು ಉಪಯೋಗಿಸಿದ ಸಾಮಾಗ್ರಿಗಳನ್ನು ಮತ್ತು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.